ತಾಯೇ ಬಂದು ನೆಲೆಸೌ
ಇಂದಿರೆ ಎನ್ನೆಯ ಮಂದಿರದೊಳಗಾನಂದದಿ
ಹಲವು ಕಾಲದಿ ಕಾಣದೆ ನಿಮ್ಮನ್ನು
ಬಳಲುತನಿರ್ಪೆನು ದೇವಿಯೆ
ನಳಿನಾನೇತ್ರೆ ಕರುಣಾದಿಂದಲಿ
ಒಲಿದು ಬಂದಿರಿ ದೇವಿಯೆ
ಮುತ್ತು ಮಾಣಿಕ್ಯದ ಮಂಟಪದಲ್ಲಿ
ರತ್ನದ ಪೀಠವನಿರಿಸುವೆನು
ವಿಷ್ಣು ಸಹಿತಲೆ ಲಕ್ಶ್ಮೀ ನಿಮ್ಮನು
ಅರ್ಥಿಯಿಮ್ ಧ್ಯಾನಿಸಿ ಪೂಜಿಪೆ
ವರಮಣಿ ಖಚಿತದ ನೆರೆಗಿಂಡಿಯೊಳು
ಸುರನದಿ ಗಂಗೆಯ ತುಂಬುತಲಿ
ಸಿರಿವರನರಸಿಯ ಚರಣವ ತೊಳೆದು
ವರವಸ್ತ್ರಗಳಿಂದೊರೆಸುವೆನು
ಅಂಗಜ ಮಾತೆಗೆ ಅಭಿಷೇಕವನು
ಸಂಭ್ರಮದಿಂದಲಿ ಮಾಡುವೆನು
ಅಂದವಾದ ಪೀತಾಂಬರವನು
ಸುಂದರನಡುವಿನೊಳುಡಿಸುವೆನು
ಸಿರಿಮುಡಿಯೆಳೆಸುತ ಹೆರಳನು ಹಾಕುತ
ಪರಿಪರಿ ಕುಸುಮವ ಮುಡಿಸುವೆನು
ಸರಸೀಜಾಕ್ಷಿಗೆ ಸರ್ವಾಭರಣವ
ಪರಮಾದರದಿಂದ್‍ಹಾಕುವೆ
ಅರಸಿನ ಕುಂಕುಮ ಅಕ್ಷತೆ ಗಂಧ
ಪರಿಪರಿ ಕುಸುಮದ ಮಾಲೆಗಳ
ಸಿರಿವರನರಸಿಯ ಕೊರಳಿಗೆ ಹಾರವ
ಪರಮಾದರದಿಂದ ಹಾಕುವೆ
ಪರಿಪರಿ ಪುಷ್ಪದಿಂದೊಡಗೂಡುತ
ವರಧೂಪಾದಿ ದೀಪಗಳ
ಬಗೆಬಗೆ ಭಕ್ಷ ಪಾಯಸದಿಂದಲೆ
ಮಿಗಿಲಾರೊಗಣೆ ಮಾಡುವೆ
ಮಂಗಳವಾದ್ಯದಿಂದೊಡಗೂಡುತ
ಅಂಗನೆರೆಲ್ಲರು ಹರುಷದಲಿ
ಮಂಗಳಾರತಿ ಎತ್ತಿ ಚಂದದಿ
ವಂದಿಸಿ ನಾನು ಬೇಡುವೆ
ರಕ್ಷಿಸು ರಕ್ಷಿಸು ತಾಯೆ ನಮ್ಮನು
ಪ್ರದಕ್ಷಿಣೆಗಳ ನಾ ಮಾಡುವೆನು
ರಕ್ಷಿಸೆಮ್ಮನು ಲಕ್ಷ್ಮೀ ನಿಮ್ಮನು
ಅರ್ಥಿಯಿಮ್ ಧ್ಯಾನಿಸಿ ಬೇಡುವೆ
ಇದನ್ನು ಸಂಗ್ರಹಿಸಿ ಕೊಟ್ಟವರು ಆತ್ಮೀಯ keshavHSK ಅವರು, ಅವರಿಗೆ ನನ್ನ ಅನಂತ ಧನ್ಯವಾದಗಳು.
0 Comments:
Post a Comment